ಲೂಕ 17: 7-10 ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ: "ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, "ಬಾ, ನನ್ನೊಂದಿಗೆ ಊಟಮಾಡು," ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅದಕ್ಕೆ ಬದಲಾಗಿ "ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರ ಮಾಡು. ಆನಂತರ ನೀನು ಊಟ ಮಾಡುವೆಯಂತೆ," ಎಂದು ಹೇಳುತ್ತಾರಲ್ಲವೇ ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ. ಹಾಗೆಯೇ ನೀವು ಸಹ ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, "ನಾವು ಕೇವಲ ಆಳುಗಳು ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ," ಎಂದುಕೊಳ್ಳಿರಿ," ಎಂದರು.
________________________
CARMEL DHYAANA is a daily reflection on the Word of God by the CARMELITE Fathers at the Infant Jesus Shrine, Pushpashrama – Mysuru, Karnataka – INDIA.
ಕಾರ್ಮೆಲ್ ಧ್ಯಾನ – ಬಾಲಯೇಸುವಿನ ಪುಣ್ಯಕ್ಷೇತ್ರ – ಪುಷ್ಪಾಶ್ರಮ, ಮೈಸೂರು ಇಲ್ಲಿಯ ಕಾರ್ಮೆಲ್ ಸಭೆಯ ಗುರುಗಳಿಂದ ದೈನಂದಿನ ದೇವರ ವಾಕ್ಯದ ಮೇಲಿನ ಧ್ಯಾನ.

0 Comments